HomeKarnataka Newsಪೂರಕ ದಾಖಲೆಗಳಿಲ್ಲದಿದ್ದರೂ ಆರೋಪ ಪಟ್ಟಿ ಅಂತಿಮ ವರದಿ ಅಲ್ಲ: ಹೈಕೋರ್ಟ್ ಸ್ಪಷ್ಟನೆ

ಪೂರಕ ದಾಖಲೆಗಳಿಲ್ಲದಿದ್ದರೂ ಆರೋಪ ಪಟ್ಟಿ ಅಂತಿಮ ವರದಿ ಅಲ್ಲ: ಹೈಕೋರ್ಟ್ ಸ್ಪಷ್ಟನೆ

For Dai;y Updates Join Our whatsapp Group

ಬೆಂಗಳೂರು: ಕಾಲ್ ಡಿಟೈಲ್ ರೆಕಾರ್ಡ್ಸ್ (ಸಿಡಿಆರ್) ಮತ್ತು ಫಾರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ವರದಿ ಸೇರಿದಂತೆ ಪೂರಕ ದಾಖಲೆಗಳು ಇಲ್ಲದಿದ್ದರೂ ಸಲ್ಲಿಸಲಾದ ಆರೋಪ ಪಟ್ಟಿ ಕಾನೂನುಬಾಹಿರವಾಗುವುದಿಲ್ಲ. ಆದರೆ ಅದನ್ನು ತನಿಖೆಯ ಅಂತಿಮ ವರದಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನಿಖೆ ಎನ್ನುವುದು ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕ್ರಮೇಣ ಸಂಗ್ರಹಿಸುವ ಪ್ರಕ್ರಿಯೆಯಾಗಿದ್ದು, ನಂತರವೂ ಹೆಚ್ಚುವರಿ ಅಂಶಗಳನ್ನು ಸೇರಿಸುವ ಅವಕಾಶವಿದೆ. ಕೆಲವು ವರದಿಗಳು ಸೇರಿಸಲ್ಪಟ್ಟಿಲ್ಲ ಎಂಬ ಕಾರಣಕ್ಕೆ ಆರೋಪ ಪಟ್ಟಿಯನ್ನು ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಇದೇ ವೇಳೆ, ಪೋಕ್ಸೋ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಡಿಫಾಲ್ಟ್ ಜಾಮೀನು ನೀಡಲು ಅವಕಾಶವಿಲ್ಲ ಎಂದು ಹೇಳಿದೆ.

ಈ ಸಂಬಂಧ, ಬೆಂಗಳೂರಿನ ಮತ್ತೀಕೆರೆಯ ನಿವಾಸಿ ಗೋವಿಂದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಪ್ರಕಾರ, 10 ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಒಳಪಡುವ ಅಪರಾಧ ಪ್ರಕರಣಗಳಲ್ಲಿ 60 ದಿನಗಳೊಳಗೆ ಮತ್ತು 10 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಪಡುವ ಪ್ರಕರಣಗಳಲ್ಲಿ 90 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಬೇಕು. ಈ ನಿಯಮದ ಮುಖ್ಯ ಉದ್ದೇಶ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ತನಿಖೆಯನ್ನು ವೇಗವಾಗಿ ಪೂರ್ಣಗೊಳಿಸುವುದು ಹಾಗೂ ಸಂತ್ರಸ್ತೆಯ ಹಿತವನ್ನು ಕಾಪಾಡುವುದಾಗಿದೆ.

ಆದರೆ, ಈ ನಿಯಮವನ್ನು ಆರೋಪಿಗಳು ಡಿಫಾಲ್ಟ್ ಜಾಮೀನು ಪಡೆಯಲು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ನಿಗದಿತ ಅವಧಿಯೊಳಗೆ ಆರೋಪ ಪಟ್ಟಿ ಸಲ್ಲಿಸಿದ ನಂತರವೂ ಹೆಚ್ಚುವರಿ ವರದಿ ಬಾಕಿ ಇದ್ದರೂ, ಡಿಫಾಲ್ಟ್ ಜಾಮೀನು ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ಅಪರಾಧ ತನಿಖೆ ಆರಂಭದಲ್ಲೇ ಸಂಪೂರ್ಣವಾಗಿರಬೇಕೆಂಬುದು ಕಡ್ಡಾಯವಲ್ಲ. ಅದು ಕಾಲಕ್ರಮೇಣ ವಿಸ್ತರಿಸುವ ಪ್ರಕ್ರಿಯೆ. ಆರೋಪ ಪಟ್ಟಿ ಸಲ್ಲಿಸುವ ಹಂತದಲ್ಲೇ ಸಂಪೂರ್ಣತೆ ಒತ್ತಾಯಿಸುವುದು ತನಿಖಾ ಸಂಸ್ಥೆಗಳ ಮೇಲೆ ಅನಾವಶ್ಯಕ ಒತ್ತಡ ಉಂಟುಮಾಡುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img