ಬೆಂಗಳೂರು:- ಬೆಸ್ಕಾಂ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ಕಡಿತವಾಗಲಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್, ಕ್ಯಾವೆರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.



