HomeKarnataka Newsದಸರಾ ರಜೆಯಲ್ಲೂ ಖಾಸಗಿ ಶಾಲೆಗಳಲ್ಲಿ ಕ್ಲಾಸ್: ಹಿಂದೂಪರ ಸಂಘಟನೆಗಳಿಂದ ಭಾರಿ ಆಕ್ರೋಶ

ದಸರಾ ರಜೆಯಲ್ಲೂ ಖಾಸಗಿ ಶಾಲೆಗಳಲ್ಲಿ ಕ್ಲಾಸ್: ಹಿಂದೂಪರ ಸಂಘಟನೆಗಳಿಂದ ಭಾರಿ ಆಕ್ರೋಶ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಶಾಲೆಗಳಿಗೆ ದಸರಾ ರಜೆ ಘೋಷಣೆಯಾಗಿದ್ದರೂ ಕೆಲವು ಖಾಸಗಿ ಶಾಲೆಗಳು ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರದ ರಜೆ ನಿಯಮ ಪಾಲಿಸದ ಶಾಲೆಗಳ ವಿರುದ್ಧ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ, ರಾಜ್ಯದ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು 19 ದಿನಗಳ ದಸರಾ ರಜೆ ಘೋಷಿಸಲಾಗಿದೆ. ಅಕ್ಟೋಬರ್ 22ರಿಂದ ಎರಡನೇ ಅವಧಿಯ ತರಗತಿಗಳು ಪುನರಾರಂಭವಾಗಲಿವೆ.

ದಸರಾ ರಜೆಯ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಪೋಷಕರೊಂದಿಗೆ ತಮ್ಮ ಊರುಗಳಿಗೆ ತೆರಳಿ ಹಬ್ಬ ಆಚರಿಸುತ್ತಾರೆ. ಆದರೆ ಕೆಲವು ಖಾಸಗಿ ಶಾಲೆಗಳು ರಜೆಯ ನಡುವೆಯೂ ತರಗತಿ ಹಾಗೂ ಪರೀಕ್ಷೆ ನಡೆಸುತ್ತಿವೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ.

ಸರ್ಕಾರದ ಆದೇಶ ಉಲ್ಲಂಘಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಡಿಡಿಪಿಐ ಹಾಗೂ ಜಿಲ್ಲಾಧಿಕಾರಿಗಳಿಗೂ ಈ ಸಂಬಂಧ ಮನವಿ ಪತ್ರ ನೀಡಲಾಗಿದೆ.

ಖಾಸಗಿ ಶಾಲೆಗಳ ಒಕ್ಕೂಟದ ಸ್ಪಷ್ಟನೆ ಏನು?

ಇನ್ನು ಹಿಂದೂಪರ ಸಂಘಟನೆಗಳ ಆರೋಪಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕ್ಯಾಮ್ಸ್ ಪ್ರತಿಕ್ರಿಯಿಸಿದ್ದು, ಸರ್ಕಾರದ ರಜೆ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ರಜೆಗಳನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ದಸರಾ ಸಂದರ್ಭದಲ್ಲಿ ಒಂದು ವಾರ ಅಥವಾ 10 ದಿನಗಳವರೆಗೆ ರಜೆ ನೀಡಲಾಗುತ್ತಿದ್ದು, ಉಳಿದ ರಜೆಗಳನ್ನು ಕ್ರಿಸ್‌ಮಸ್ ಸೇರಿದಂತೆ ಇತರೆ ಹಬ್ಬಗಳ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ ಎಂದು ಕ್ಯಾಮ್ಸ್ ಶಶಿಕುಮಾರ್ ಹೇಳಿದ್ದಾರೆ.

ಸ್ಥಳೀಯ ಹಬ್ಬಗಳಿಗೂ ರಜೆಗಳನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ತರಗತಿಗಳು ನಡೆಯದಿದ್ದ ಸಂದರ್ಭಗಳಲ್ಲಿ ಯಾರೂ ಪ್ರಶ್ನಿಸಿರಲಿಲ್ಲ. ಈಗ ಮಾತ್ರ ಈ ವಿಚಾರವನ್ನು ಪ್ರಶ್ನಿಸಲಾಗುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಹೀಗಾಗಿ ದಸರಾ ರಜೆ ವಿಚಾರ ಇದೀಗ ಖಾಸಗಿ ಶಾಲೆಗಳು ಹಾಗೂ ಹಿಂದೂಪರ ಸಂಘಟನೆಗಳ ನಡುವೆ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಉಲ್ಲಂಘನೆಯಾಗಿದೆಯೇ ಅಥವಾ ಶಾಲೆಗಳಿಗೆ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ರಜೆ ಹೊಂದಾಣಿಕೆ ಮಾಡಿಕೊಳ್ಳುವ ಅವಕಾಶವಿದೆಯೇ ಎಂಬುದರ ಕುರಿತು ಶಿಕ್ಷಣ ಇಲಾಖೆ ಕೈಗೊಳ್ಳುವ ಮುಂದಿನ ಕ್ರಮ ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img