ಬೀದರ್: ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಮೃತ ಬಾಲಕಿಯನ್ನು ಮದಿಯಾ ನಶೀರ್ ಪಾಷಾ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದಿಯಾ ಚಿಕ್ಕಪ್ಪ ಎಂ.ಡಿ. ಯೂಸುಫ್ ತಿಳಿಸಿದಂತೆ, ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಬಾಲಕಿಯ ಮೇಲೆ ನಡೆದ ಹಿಂಸೆ ಹಾಗೂ ಕಿರುಕುಳದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರೆಹಿಡಿದಿವೆ.
ಪೊಲೀಸರು ಘಟನೆ ಕುರಿತು ತನಿಖೆ ಮುಂದುವರೆಸಿದ್ದಾರೆ..



