ನವದೆಹಲಿ: ಗ್ಯಾಸ್ ಅಭಾವದ ನಡುವೆಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ಕೊಟ್ಟಿದೆ.
ಹಣಕಾಸು ವರ್ಷ ಪ್ರಾರಂಭವಾಗಿದೆ. ಈಗಾಗಲೇ ಏಪ್ರಿಲ್ ತಿಂಗಳನ್ನ ದುಬಾರಿ ತಿಂಗಳು ಎಂದೇ ಕರೆಯಲಾಗುತ್ತಿದೆ. ಇದರ ಬೆನ್ನಲ್ಲಿಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರವು ದೇಶದ ಜನತೆಗೆ ಶಾಕ್ ಕೊಟ್ಟಿದೆ. ಇದಕ್ಕೂ ಮೊದಲು, ಮಾರ್ಚ್ 1 ರಂದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನ 114.5 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇದು ಕಳೆದ ಒಂದು ತಿಂಗಳಲ್ಲಿ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾಗಿದೆ. ಸದ್ಯ ಗೃಹಬಳಕೆ ಸಿಲಿಂಡರ್ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 14.2 ಕೆಜಿ ಸಿಲಿಂಡರ್ ಬೆಲೆ ಮಾ.7 ರಂದು ಕೊನೆಯದ್ದಾಗಿ 60 ರೂ.ಗಳಿಗೆ ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 913 ರೂ. ಬೆಲೆಗೆ ಮಾರಾಟವಾಗುತ್ತಿದೆ.
ಮೊದಲೇ ಸಿಲಿಂಡರ್ ಸಿಗ್ತಿಲ್ಲ ಎಂದು ಹೋಟೆಲ್ ಉದ್ಯಮಿಗಳು ಪರದಾಡುತ್ತಿರುವ ಸಂದರ್ಭದಲ್ಲಿ ಈ ಬೆಲೆ ಏರಿಕೆ ಇನ್ನಷ್ಟು ಸಂಕಷ್ಟ ತಂದೊಡ್ಡಿದೆ. ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ಭಾರತದಲ್ಲಿ ತೈಲ ಅಭಾವ ಉಂಟಾಗಿದ್ದು, ಇದರಿಂದ ಹೋಟೆಲ್ ಮಾಲೀಕರು ಸೇರಿ ಜನತೆ ಕಂಗಾಲಾಗಿದ್ದಾರೆ.



