HomeEntertainmentನಟ ವಿಜಯ್‌ ದೇವರಕೊಂಡ ವಿರುದ್ಧ ದೂರು ದಾಖಲು

ನಟ ವಿಜಯ್‌ ದೇವರಕೊಂಡ ವಿರುದ್ಧ ದೂರು ದಾಖಲು

For Dai;y Updates Join Our whatsapp Group

Spread the love

ಟಾಲಿವುಡ್ ಚಿತ್ರರಂಗದ ಖ್ಯಾತ ನಟ ​ ವಿಜಯ್ ದೇವರಕೊಂಡಗೆ ಸಂಕಷ್ಟ ಎದುರಾಗಿದೆ. ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು ಇದೀಗ ವಿಜಯ್‌ ದೇವರಕೊಂಡ ವಿರುದ್ಧ ದೂರು ನೀಡಲಾಗಿದೆ.

ಕಳೆದ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ವಿಜಯ್‌ ದೇವರಕೊಂಡ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಯುದ್ಧಗಳಿಗೆ ಹೋಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘500 ವರ್ಷಗಳ ಹಿಂದೆ ಬುಡಕಟ್ಟು ಜನರು ಯುದ್ಧ ಮಾಡಿದ ರೀತಿಯಲ್ಲಿ ಪಾಕಿಸ್ತಾನಿಗಳು ವರ್ತಿಸುತ್ತಿದ್ದಾರೆ’ ಎಂದು ವಿಜಯ್ ದೇವರಕೊಂಡ ಹೇಳಿದ್ದರು. ಈ ಹೇಳಿಕೆಯಿಂದ ಬುಡಕಟ್ಟು ಜನಾಂಗದ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಬುಡಕಟ್ಟು ಜನರನ್ನು ಪಾಕಿಸ್ತಾನದವರಿಗೆ ಹೋಲಿಸಿದ್ದರಿಂದ ವಿವಾದ ಸೃಷ್ಟಿ ಆಗಿದ್ದು ಇದೀಗ ವಿಜಯ್‌ ದೇವರಕೊಂಡ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ದೂರು ದಾಖಲಾಗಿದೆ.

ತಮ್ಮ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ನಟ, ‘ಯಾವುದೇ ಸಮುದಾಯವನ್ನು, ವಿಶೇಷವಾಗಿ ಪರಿಶಿಷ್ಟ ಪಂಗಡಗಳನ್ನು ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶವಿಲ್ಲ. ನನ್ನ ಹೇಳಿಕೆಯು ತಪ್ಪಾಗಿ ಅರ್ಥೈಸಲ್ಪಟ್ಟಿದ್ದರೆ ಅಥವಾ ನೋವುಂಟುಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಶಾಂತಿ, ಪ್ರಗತಿ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವುದು ನನ್ನ ಏಕೈಕ ಉದ್ದೇಶವಾಗಿತ್ತು. ನಾನು ಒಗ್ಗಟ್ಟನ್ನು ಹೆಚ್ಚಿಸಲು ಬಯಸುತ್ತೇನೆ ಹೊರತು ಎಂದಿಗೂ ವಿಭಜಿಸಲು ಬಯಸುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!