HomeIndia Newsತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ!

ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ!

For Dai;y Updates Join Our whatsapp Group

ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಕುರಿತ ಪ್ರತಿಭಟನಾ ಸಭೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಏನಿದು ವಿವಾದ?

ತಂಜಾವೂರಿನಲ್ಲಿ ಡಿಎಂಕೆ ಆಯೋಜಿಸಿದ್ದ ಕಾವೇರಿ ನೀರಿನ ಹಕ್ಕು ಕುರಿತ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೇ ವೇಳೆ ಸಭೆಯಲ್ಲಿ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ,

“ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು” ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ವಿವಾದಕ್ಕೆ ಕಾರಣವಾಯಿತು.

ಉದಯನಿಧಿ ಅವರ ಹೇಳಿಕೆ ಮಹಿಳೆಯರ ಘನತೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿರುವ ಟಿವಿಕೆ ಪಕ್ಷದ ನಾಯಕರು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ತಂಜಾವೂರು ಪೊಲೀಸ್ ಠಾಣೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ದೂರು ಸಲ್ಲಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ನಾಯಕರು ಮಹಿಳೆಯರ ಬಗ್ಗೆ ಇಂತಹ ಹೇಳಿಕೆ ನೀಡುವುದು ಅಸ್ವೀಕಾರಾರ್ಹ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೂರು ದಾಖಲಾದ ಬಳಿಕ ಟಿವಿಕೆ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರಿಂದ, ಚೆನ್ನೈನ ನೀಲಂಗರೈನಲ್ಲಿರುವ ಉದಯನಿಧಿ ಸ್ಟಾಲಿನ್ ನಿವಾಸದ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಬಳಿಕ ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img