ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಡಿಸೆಂಬರ್ ೧೪ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರನ್ಸ್ ಹಾಲ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದಾಗಿದೆ. ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ, ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನAತೆ ಒಟ್ಟು ೧೪ ಬೆಂಚ್‌ಗಳನ್ನು ರಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು ೧೯೮೯೬ ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೨೮೨೧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು, ¨ÀsÆಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದು ತಿಳಿಸಿದರು.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬAದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿAದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬAದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬAದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ ೧೪ರಂದು ಜರುಗುವ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ, ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.



