ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಕಟಾವಿಗೆ ಬಂದಿದ್ದ ಹೇಸರು ಬೆಳೆ ಸೇರಿದಂತೆ ಹಲವು ಬೆಳೆಗಳಿಗೆ ಹಾನಿ ಉಂಟಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಸರ್ಕಾರ ಕೂಡಲೇ ಬೆಳೆ ನಷ್ಟ ಪರಿಹಾರ ಹಾಗೂ ಬೆಳೆ ವಿಮೆ ಹಣ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿ.ಆರ್. ನಾರಾಯಣರೆಡ್ಡಿ ಬಣದ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ವಿಜಯಸಾಕ್ಷಿ ದಿನಪತ್ರಿಕೆಯ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದರು.
ಇದರ ಫಲವಾಗಿ ಗದಗ ಜಿಲ್ಲೆಗೆ ಒಟ್ಟೂ 91 ಕೋಟಿ ರೂಪಾಯಿಗಳ ಬೆಳೆ ಹಾನಿ ಪರಿಹಾರವನ್ನು ಆನ್‌ಲೈನ್ ಮೂಲಕ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರು ರೈತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಿದ್ದು ಸ್ವಾಗತಾರ್ಹ ಎಂದು ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



