ಚಿಕ್ಕಮಗಳೂರು:- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ವಿಚಾರವಾಗಿ CT ರವಿ ಅವರನ್ನು ಪೊಲೀಸರು ಹೀಗಾಗಲೇ ಅರೆಸ್ಟ್ ಮಾಡಿದ್ದಾರೆ.
ಇದೇ ವಿಚಾರವಾಗಿ ಕೆಂಡಕಾರಿರುವ ನಗರ ಬಿಜೆಪಿ ಮುಖಂಡರು, ಇಂದು ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.



