ರಾಮನಗರ: ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಸಿಲಿಂಡರ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಹೇಶ್ ನಾಯಕ್ (19) ಮತ್ತು ಗೋವಿಂದರಾಜು (20) ಎಂದು ಗುರುತಿಸಲಾಗಿದೆ. ಆರೋಪಿಗಳು ಗ್ಯಾಸ್ ಸರಬರಾಜು ವಾಹನದಿಂದ 8 ಸಿಲಿಂಡರ್ ಕದ್ದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.
ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತರಿಂದ 8 ಗ್ಯಾಸ್ ಸಿಲಿಂಡರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



