HomeBengaluru Newsಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ: ಕಾರ್ಯಕ್ರಮಕ್ಕೆ ಬರುವ ವಿಶೇಷ ಆಹ್ವಾನಿತರು ಇವರೇ ನೋಡಿ!

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ: ಕಾರ್ಯಕ್ರಮಕ್ಕೆ ಬರುವ ವಿಶೇಷ ಆಹ್ವಾನಿತರು ಇವರೇ ನೋಡಿ!

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಸಮಾರಂಭಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ.

ಈ ಕಾರ್ಯಕ್ರಮ ದೇಶದ ಗಮನ ಸೆಳೆಯುವ ರೀತಿಯಲ್ಲಿ ಭವ್ಯವಾಗಿ ಆಯೋಜನೆಗೊಳ್ಳುತ್ತಿದ್ದು, ವಿವಿಐಪಿ ಗಣ್ಯರು ಹಾಗೂ ಜನಸಾಮಾನ್ಯರನ್ನು ಒಳಗೊಂಡ ವಿಶಿಷ್ಟ ಆಹ್ವಾನಿತರ ಪಟ್ಟಿ ಸಿದ್ಧವಾಗಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪ್ರಮುಖ ಸಂಸದರು ಸಹ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಸಮಾರಂಭಕ್ಕೆ ಸರ್ವಧರ್ಮ ಗುರುಗಳನ್ನು ಆಹ್ವಾನಿಸಲಾಗಿದ್ದು, ಕಾರ್ಯಕ್ರಮಕ್ಕೆ ಧಾರ್ಮಿಕ ಸೌಹಾರ್ದತೆಯ ವಿಶೇಷ ಸಂದೇಶ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ವಿಶೇಷವಾಗಿ ಡಿ.ಕೆ. ಶಿವಕುಮಾರ್ ಅವರ ತವರೂರಾದ ಕನಕಪುರದ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ರೈತ ಮುಖಂಡರು, ದಲಿತ ಹಾಗೂ ಹಿಂದುಳಿದ ವರ್ಗಗಳ ನಾಯಕರು, ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು ಮತ್ತು ಮಹಿಳಾ ಮುಖಂಡರಿಗೆ ಸಹ ವಿಶೇಷ ಆಹ್ವಾನ ನೀಡಲಾಗಿದೆ.

ಮಾಧ್ಯಮ, ಚಿತ್ರರಂಗ, ನ್ಯಾಯಾಂಗ, ಕ್ರೀಡೆ ಹಾಗೂ ನಾಟಕ ರಂಗದ ಗಣ್ಯರು, ಸಾಹಿತಿಗಳು ಮತ್ತು ಕಲಾವಿದರು ಕೂಡ ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಯುವ ಮುಖಂಡರು ಸಹ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.

ಒಟ್ಟಾರೆ, ರಾಜಕೀಯ ಗಣ್ಯರು ಮತ್ತು ಜನಸಾಮಾನ್ಯರ ಅಪೂರ್ವ ಸಂಗಮಕ್ಕೆ ಈ ಪ್ರಮಾಣ ವಚನ ಸಮಾರಂಭ ಸಾಕ್ಷಿಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!