ಮೈಸೂರು: ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರಿನಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳಾಗಿದ್ದು,
ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಮನನೊಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೂದನೂರಿನ ಕೆರೆಯಲ್ಲಿ ಮೂವರ ಮೃತದೇಹ ಒಂದೇ ಕಡೆ ಪತ್ತೆಯಾಗಿದೆ. ತಂದೆ ಮಹದೇವಸ್ವಾಮಿ, ಪತ್ನಿ ಮಂಜುಳಾ ಮತ್ತು ಮಗಳು ಹರ್ಷಿತಾ ಮೃತ ದೇಹ ಪತ್ತೆಯಾಗಿದೆ. ಮೂವರು ಕೂಡ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಒಂದೇ ಸ್ಥಳದಲ್ಲಿ ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



