HomeKarnataka Newsಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು ಪ್ರಕರಣ: ಸಂಪೂರ್ಣ ವರದಿ ಕೇಳಿದ ಸಚಿವ ಶರಣ ಪ್ರಕಾಶ್...

ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು ಪ್ರಕರಣ: ಸಂಪೂರ್ಣ ವರದಿ ಕೇಳಿದ ಸಚಿವ ಶರಣ ಪ್ರಕಾಶ್ ಪಾಟೀಲ್

For Dai;y Updates Join Our whatsapp Group

Spread the love

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಪ್ರಕರಣದ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಸಾವಿನ ಘಟನೆಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು. ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಬಗ್ಗೆ ವಿವರವಾದ ಮಾಹಿತಿ ಕೇಳಿದ್ದು, ಎಲ್ಲಾ ಅಂಶಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಹಲವು ವರ್ಷಗಳ ಅಂಕಿ-ಅಂಶಗಳನ್ನು ಪರಿಶೀಲಿಸಿದಾಗ ಆಸ್ಪತ್ರೆಯ ಸಾವಿನ ಪ್ರಮಾಣ ಶೇ.4 ರಿಂದ 5ರಷ್ಟಿದೆ. ಜಯದೇವ ಆಸ್ಪತ್ರೆ ರಾಜ್ಯಕ್ಕಷ್ಟೇ ಅಲ್ಲ, ದೇಶದ ಮಟ್ಟದಲ್ಲೂ ಮಾದರಿ ಆರೋಗ್ಯ ಸಂಸ್ಥೆಯಾಗಿದೆ. ಇಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ.

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಯ ಸೌಲಭ್ಯವೂ ಇದೆ” ಎಂದು ಹೇಳಿದರು. ಜಯದೇವ ಆಸ್ಪತ್ರೆ ಕುರಿತು ತಪ್ಪು ಮಾಹಿತಿ ಹರಡುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಲಾಭವಾಗುವ ಸಾಧ್ಯತೆ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಸಾವಿನ ಪ್ರಕರಣಗಳಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ವೈದ್ಯರಿಂದ ಮಾಹಿತಿ ಪಡೆದು ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಈ ಪ್ರಕರಣದ ಕುರಿತು ಸಂಪೂರ್ಣ ಅವಲೋಕನ ನಡೆಸುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!