ಕೋಲ್ಕತ್ತಾ: ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ನೀಡುವಲ್ಲಿ ವಿಳಂಬ ಹಾಗೂ ಕಾರ್ಯಕ್ರಮದ ಸ್ಥಳ ಬದಲಾವಣೆಯನ್ನು ಗಮನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು, “ಮಮತಾ ದೀದಿ, ನೀವು ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗೆ ಅವಕಾಶ ನೀಡಲಾಗುತ್ತಿಲ್ಲ ಏಕೆ?” ಎಂದು ಪ್ರಶ್ನಿಸಿದ್ದಾರೆ.
ಮೊದಲು ಬಿದಾನಗರದಲ್ಲಿ ನಡೆಯಬೇಕಿದ್ದ ಸಮಾವೇಶಕ್ಕೆ ಮಮತಾ ಬ್ಯಾನರ್ಜಿ ಸರ್ಕಾರ ಅನುಮತಿ ನೀಡದ ಕಾರಣ, ಕೊನೆ ಕ್ಷಣದಲ್ಲಿ ಕಾರ್ಯಕ್ರಮದ ಸ್ಥಳವನ್ನು ಬಾಗ್ದೋಗ್ರಾ ವಿಮಾನ ನಿಲ್ದಾಣದ ಸಮೀಪದ ಗೋಸೈನ್ಪುರಗೆ ಬದಲಾಯಿಸಬೇಕಾಯಿತು. ರಾಷ್ಟ್ರಪತಿಗಳು ಈ ಬದಲಾವಣೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಮಮತಾ ಬ್ಯಾನರ್ಜಿ ಬಿಜೆಪಿ ಹೇಳಿದಂತೆ ರಾಜಕೀಯ ಮಾಡಬೇಡಿ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸ್ಥಿತಿಗಳನ್ನು ನೋಡಿ. ಬುಡುಕಟ್ಟು ಜನಾಂಗದವರ ಮೇಲೆ ದೌರ್ಜನ್ಯವಾದಾಗ ಎಲ್ಲಿ ಹೋಗಿದ್ರಿ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಪ್ರಶ್ನಿಸಿದ್ದಾರೆ.



