HomeGadag Newsಭ್ರಷ್ಟರನ್ನು ರಕ್ಷಿಸುತ್ತಿರುವ ಸಿಎಂ ರಾಜೀನಾಮೆಗೆ ಆಗ್ರಹ

ಭ್ರಷ್ಟರನ್ನು ರಕ್ಷಿಸುತ್ತಿರುವ ಸಿಎಂ ರಾಜೀನಾಮೆಗೆ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ನಿಷ್ಪಕ್ಷ ತನಿಖೆಗಾಗಿ ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕಿದ್ದ ಸಿದ್ದರಾಮಯ್ಯನವರು ಜಾಣ ಕುರುಡುತನದ ಮೂಲಕ ಬ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ.

ಕೂಡಲೇ ಸಿದ್ದರಾಮಯ್ಯ ಅವರು ಮುಖಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಡಿರುವ ಅವರು, ಹಗರಣದ ಕುರಿತು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಮೇಲಾಧಿಕಾರಿಯ ಸಾವಿಗೆ ನ್ಯಾಯ ಒದಗಿಸಿಕೊಡುವ ಬದಲು ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡುವ ಮೂಲಕ ಸಿದ್ದರಾಮಯ್ಯನವರು ಇನ್ನು ಎಷ್ಟು ಪ್ರಾಮಾಣಿಕ ನೌಕರರ ಪ್ರಾಣ ತಗೆದುಕೊಳ್ಳುತ್ತಾರೋ ಎಂಬ ಆತಂಕ ರಾಜ್ಯದ ಜನತೆಯಲ್ಲಿ ಮೂಡಿದೆ.

75 ಲಕ್ಷ ರೂ ಮೌಲ್ಯದ ವಿದೇಶಿ ವಾಚ್ ಕೊಡುಗೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದುದ್ದಕ್ಕೂ ಭ್ರಷ್ಟರನ್ನ ಪೋಷಿಸುತ್ತಲೇ ಬಂದಿದ್ದಾರೆ. ಇವರಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಕೂಡಲೇ ರಾಜೀನಾಮೆ ಸಲ್ಲಿಸಿ ತನಿಖೆಗೆ ಸಹಕರಿಸಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img