HomeGadag Newsರೈತನಿಗೆ ಸಾಲ ಸಿಗದಿದ್ದರೆ ಅಭಿವೃದ್ಧಿ ಅಸಾಧ್ಯ: ಬಸವರಾಜ ಬೊಮ್ಮಾಯಿ

ರೈತನಿಗೆ ಸಾಲ ಸಿಗದಿದ್ದರೆ ಅಭಿವೃದ್ಧಿ ಅಸಾಧ್ಯ: ಬಸವರಾಜ ಬೊಮ್ಮಾಯಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬ್ಯಾಂಕಿಂಗ್ ವ್ಯವಸ್ಥೆ ಕೇವಲ ಹಣಕಾಸು ವ್ಯವಹಾರಗಳಿಗೆ ಸೀಮಿತವಾಗದೇ ರೈತರು, ಬಡವರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಬಲ ತುಂಬಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ (ಡಿಎಲ್‌ಆರ್‌ಸಿ) ಹಾಗೂ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ (ಡಿಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿ ಕ್ಷೇತ್ರದಲ್ಲಿ ಒಂದು ಶೇಕಡಾ ಬೆಳವಣಿಗೆಯಾದರೆ ಉತ್ಪಾದನಾ ಕ್ಷೇತ್ರದಲ್ಲಿ ನಾಲ್ಕು ಶೇಕಡಾ ಹಾಗೂ ಸೇವಾ ಕ್ಷೇತ್ರದಲ್ಲಿ ಹತ್ತು ಶೇಕಡಾ ಬೆಳವಣಿಗೆ ಸಾಧ್ಯ. ರೈತರ ಕೊಳ್ಳುವ ಶಕ್ತಿ ಹೆಚ್ಚಿದಾಗ ದೇಶದ ಆರ್ಥಿಕ ಚಟುವಟಿಕೆಗಳೂ ವೇಗ ಪಡೆಯುತ್ತವೆ,” ಎಂದು ಹೇಳಿದರು.

ರಾಜ್ಯ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ನೀಡುತ್ತಿದ್ದರೂ ಎಲ್ಲ ರೈತರಿಗೆ ಅದರ ಲಾಭ ಸಿಗುತ್ತಿಲ್ಲ. ಹೀಗಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಸಾಲ ವಿತರಿಸಿ ರೈತರ ಬೆನ್ನಿಗೆ ನಿಲ್ಲಬೇಕು ಎಂದು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳ ವಿಸ್ತರಣೆ ಅಗತ್ಯ. ರಾಷ್ಟ್ರೀಕೃತ ಬ್ಯಾಂಕುಗಳು ಹೊಸ ಶಾಖೆ ಆರಂಭಿಸಿ ಜನರಿಗೆ ಸುಲಭ ಸೇವೆ ಒದಗಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮುದ್ರಾ ಯೋಜನೆಯಡಿ ಯುವ ಉದ್ಯಮಿಗಳಿಗೆ ಹೆಚ್ಚಿನ ಸಾಲ ವಿತರಿಸಬೇಕು ಎಂದರು.

ಸ್ವಸಹಾಯ ಸಂಘಗಳು, ಮಹಿಳಾ ಗುಂಪುಗಳು, ಸಣ್ಣ ಕೈಗಾರಿಕೆಗಳು ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ಸುಲಭ ಸಾಲ ಸೌಲಭ್ಯ ದೊರೆಯಬೇಕು. ಕ್ರೆಡಿಟ್ ಕಾರ್ಡ್ ಸೇರಿದಂತೆ ವಿವಿಧ ಹಣಕಾಸು ನೆರವು ನೀಡುವ ಮೂಲಕ ಅವರ ಜೀವನಮಟ್ಟ ಸುಧಾರಣೆಗೆ ಬ್ಯಾಂಕುಗಳು ಕೈಜೋಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಂತೋಷ್ ಎಂ.ವಿ. ಅವರು 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಬ್ಯಾಂಕಿಂಗ್ ಪ್ರಗತಿ ವರದಿ ಮಂಡಿಸಿದರು. ಜಿಲ್ಲೆಯಲ್ಲಿ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ಶೇ. 98.73ರಷ್ಟು ಗುರಿ ಸಾಧನೆಯಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ 7,093 ಅರ್ಜಿಗಳು ಮಂಜೂರಾಗಿದ್ದು, 6,944 ಫಲಾನುಭವಿಗಳಿಗೆ ಸಾಲ ವಿತರಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಆರ್‌ಬಿಐ ಅಧಿಕಾರಿ ವಿಜಯಶ್ರೀ, ನಬಾರ್ಡ್ ಎಜಿಎಂ ಹನುಮಂತರಾಜು, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ರಾಘವೇಂದ್ರ ರಾವ್ ಸೇರಿದಂತೆ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 “ರೈತ, ಬಡವರು ಮತ್ತು ಮಹಿಳೆಯರಿಗೆ ಹೆಚ್ಚು ಸಾಲ ಸೌಲಭ್ಯ ನೀಡಿದಾಗ ಮಾತ್ರ ಗ್ರಾಮೀಣ ಆರ್ಥಿಕತೆ ಬಲಿಷ್ಠವಾಗುತ್ತದೆ.”

ಬಸವರಾಜ ಬೊಮ್ಮಾಯಿ, ಸಂಸದ

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!