HomeGadag Newsಭ್ರಷ್ಠಾಚಾರ ನಿಯಂತ್ರಣಕ್ಕೆ ಡಿಜಟಲೀಕರಣ ಸಹಕಾರಿ: ಸಚಿವ ಡಾ. ಎಚ್.ಕೆ. ಪಾಟೀಲ 

ಭ್ರಷ್ಠಾಚಾರ ನಿಯಂತ್ರಣಕ್ಕೆ ಡಿಜಟಲೀಕರಣ ಸಹಕಾರಿ: ಸಚಿವ ಡಾ. ಎಚ್.ಕೆ. ಪಾಟೀಲ 

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಡಿಜಟಲೀಕರಣಕ್ಕೆ ವೇಗವನ್ನು ನೀಡಿದ್ದು, ಮೂರು ತಿಂಗಳ ಒಳಗಾಗಿ ಡಿಜಿಟಲಿಕರಣ ವ್ಯವಸ್ಥೆ ಪೂರ್ಣಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗದಗ ತಾಲೂಕಿನ ಭೂ ದಾಖಲೆಗಳ ಡಿಜಟಲೀಕರಣ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಸೀಲ್ದಾರರುಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಗದಗ ತಹಸೀಲ್ದಾರರ ಕಚೇರಿಯಲ್ಲಿ ಭೂ ದಾಖಲೆಗಳ ಡಿಜಟಲಿಕರಣಕ್ಕೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಭೂ ದಾಖಲೆಗಳನ್ನು ಎ, ಬಿ, ಸಿ, ಡಿ, ಇ, ಎಂದು ವಿಂಗಡಿಸಿ, ದಾಖಲಿಕರಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಎ ಮತ್ತು ಬಿ ರಜಿಸ್ಟರ್‌ಗಳು 27095 ಇದ್ದು, ಒಟ್ಟು 51.74 ಲಕ್ಷ ಪುಟಗಳಿವೆ. ಎಲ್ಲ ಹಂತಗಳ ದಾಖಲೆಗಳ ಒಟ್ಟಾರೆ 68.50 ಲಕ್ಷ ಪುಟಗಳಿವೆ. ಅವೆಲ್ಲವನ್ನೂ ಸ್ಕ್ಯಾನ್ ಮಾಡಿ ಸಂರಕ್ಷಣೆ ಮಾಡುವ ಮೂಲಕ ಸುಲಭವಾಗಿ ಸಿಗುವಂತೆ ಕ್ರಮ ವಹಿಸಲಾಗುತ್ತಿದೆ. ಇದೊಂದು ಸರ್ಕಾರದ ಕ್ರಾಂತಿಕಾರಿ ಆಡಳಿತಾತ್ಮಕ ಹೆಜ್ಜೆ ಎಂದು ನುಡಿದರು.

ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಜಾರಿಗೊಳಿಸಲು ಹಾಗೂ ವ್ಯವಸ್ಥೆಯನ್ನು ಚುರುಕುಗೊಳಿಸಿ ಕ್ರಿಯಾಶೀಲವಾಗಿಸಲು, ಅಲ್ಲದೆ ದಾಖಲೆಗಳನ್ನು ಶೀಘ್ರ ಸಾರ್ವಜನಿಕರಿಗೆ ತಲುಪಿಸಲು ಈ ದಾಖಲಿಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಭೂ ಸುರಕ್ಷಾ ಯೋಜನೆಯಿಂದ ದಾಖಲೆಗಳು ಸುಭದ್ರ, ಶಾಶ್ವತವಾಗಿಸುವದು, ನೇರ ಸುಲಭವಾಗಿ ಸಾರ್ವಜನಿಕರಿಗೆ ತಲುಪಿಸಲು ಸಾಧ್ಯವಾಗಲಿದೆ. ದಾಖಲೆಗಳ ತಿದ್ದಲು ಕಳೆಯಲು ಅಸಾಧ್ಯ. ತ್ವರಿತ ಆಡಳಿತ ನೀಡಲು ಇದರಿಂದ ಸಾಧ್ಯ ಎಂದು ನುಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ಅವಳಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿಟಲ್ ದಾಖಲೆಗಳಾಗಿ ಪರಿವರ್ತನೆಯಾಗುತ್ತದೆ. ರೆಕಾರ್ಡ್ ರೂಮ್‌ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಯಾಗುತ್ತದೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯವಾಗಿದೆ. ಸಾರ್ವಜನಿಕರು ನೇರವಾಗಿ ಪಡೆದುಕೊಳ್ಳುವ ಸೌಲಭ್ಯ ಸಿಗಲಿದೆ. ವಿನಾಕಾರಣ ವಿಳಂಬ, ಅಡೆತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ಪ್ರಯತ್ನ ಸರ್ಕಾರದಿಂದ ನಡೆದಿದೆ. ಡಿಜಿಟಲ್ ಸ್ಪರ್ಶದಿಂದ ಉತ್ತಮ ಜನಪರ ಆಡಳಿತ ನಿಮ್ಮ ಭೂ ಒಡೆತನಕೊಂದು ಗ್ಯಾರಂಟಿ ನೀಡಿದಂತಾಗುತ್ತದೆ ಎಂದು ಭೂ ದಾಖಲೆಗಳ ಕುರಿತು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!