HomeKoppalಕಟ್ಟಡ ಕಾರ್ಮಿಕರ ವಿವಿಧ ಸೌಲಭ್ಯಗಳ ಮಾಹಿತಿ ಬಹಿರಂಗಕ್ಕೆ ಒತ್ತಾಯ

ಕಟ್ಟಡ ಕಾರ್ಮಿಕರ ವಿವಿಧ ಸೌಲಭ್ಯಗಳ ಮಾಹಿತಿ ಬಹಿರಂಗಕ್ಕೆ ಒತ್ತಾಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಕಟ್ಟಡ ಕಾರ್ಮಿಕರಿಗೆ ಮಂಜೂರಾದ ವಿವಿಧ ಸೌಲಭ್ಯಗಳ ಪಟ್ಟಿ ಹಾಗೂ ಲ್ಯಾಪ್‌ಟಾಪ್ ವಿತರಣೆ ಮಾಡಿದ ಮಾಹಿತಿ ಬಹಿರಂಗಪಡಿಸಲು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ) ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಒತ್ತಾಯಿಸಿದೆ.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರಿಗೆ ಮನವಿ ಪತ್ರ ಸಲ್ಲಿಸಿ, 2023 ಸೆಪ್ಟೆಂಬರ್‌ನಿಂದ 2024ರ ಮೇ 16ರವರೆಗೆ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಮಂಜೂರಾದ ವಿವಿಧ ಸೌಲಭ್ಯಗಳು ಮತ್ತು ವಿತರಣೆಯಾದ ಲ್ಯಾಪ್‌ಟಾಪ್‌ಗಳ ಪಟ್ಟಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಸಂಘಟನೆಗಳಿಗೆ ಮಾಹಿತಿ ನೀಡಲು ಕೋರಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಜಿಲ್ಲಾ ಅಧ್ಯಕ್ಷ ಖಾಸಿಮ್ ಸರ್ದಾರ್ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ) ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ್ ಬಿ.ಪಾತ್ರೋಟಿ, ತಾಲೂಕಾ ಸಂಚಾಲಕ ನೂರ್ ಸಾಬ್ ಹೊಸಮನಿ, ಗಿಣಿಗೇರಾ ಗ್ರಾಮ ಘಟಕದ ಅಧ್ಯಕ್ಷ ರಾಜಪ್ಪ ಚೌಹಾಣ್ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!