Homekoppalಪ್ರಜಾಪ್ರಭುತ್ವ ದಿನಾಚರಣೆ ಯಶಸ್ಸಿಗೆ ಶ್ರಮಿಸಿ : ಎಡಿಸಿ ಸಿದ್ರಾಮೇಶ್ವರ

ಪ್ರಜಾಪ್ರಭುತ್ವ ದಿನಾಚರಣೆ ಯಶಸ್ಸಿಗೆ ಶ್ರಮಿಸಿ : ಎಡಿಸಿ ಸಿದ್ರಾಮೇಶ್ವರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಹಮ್ಮಿಕೊಳ್ಳುತ್ತಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಎಡಿಸಿ ಸಿದ್ರಾಮೇಶ್ವರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಮಾನವ ಸರಪಳಿ ಕಾರ್ಯಕ್ರಮ ಹಾದುಹೋಗುವ ಗ್ರಾಮ ಪಂಚಾಯತಿ, ನಗರ ಪ್ರದೇಶದ ಎಲ್ಲ ಪ್ರಾಥಮಿಕ ಶಾಲೆಗಳ 6ರಿಂದ 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಮತ್ತು ನಗರಸಭೆ, ಪಟ್ಟಣ ಪಂಚಾಯತಿ ಚನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತಿಯ ಮಹಿಳಾ ಒಕ್ಕೂಟದ ಸದಸ್ಯರು, ನಗರ ಪ್ರದೇಶದ ವಿವಿಧ ಮಹಿಳಾ ಒಕ್ಕೂಟದ ಸದಸ್ಯರು, ನರೇಗಾ ಕೂಲಿಕಾರರು ಮತ್ತು ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಹಾಸ್ಟೆಲ್‌ನಲ್ಲ್ಲಿರುವ ವಿದ್ಯಾರ್ಥಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸರ್ವ ಸಿಬ್ಬಂದಿ ಸಾರ್ವಜನಿಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಭದ್ರತೆಯ ದೃಷ್ಟಿಯಿಂದ ಮಾನವ ಸರಪಳಿ ಕಾರ್ಯಕ್ರಮ ಜರುಗುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಒದಗಿಸಲು ಪೊಲೀಸ್ ಇಲಾಖೆಯವರು ಕ್ರಮ ವಹಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಜಿ.ಹೆಚ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾ.ಪಂ ಇ.ಓ.ಗಳು ಉಪಸ್ಥಿತರಿದ್ದರು.

ಸೆ.15ರ ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಆಯೋಜಿಸಲು ತಿರ್ಮಾನಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒ ಪಾಲ್ಗೊಳ್ಳಲಿದ್ದಾರೆ.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img