HomePolitics Newsಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ...

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ ಹಲವು ದಿನಗಳ ಕಾಲ ಖಾತೆ ಹಂಚಿಕೆ ಮಾಡದಿರುವುದು ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಅಧಿಕೃತ ಆದೇಶ ಹೊರಬೀಳುವುದು ಮಾತ್ರ ಬಾಕಿ ಇದೆ ಎಂದು ತಿಳಿದುಬಂದಿದೆ.

ಖಾತೆ ಹಂಚಿಕೆ ವಿಚಾರವಾಗಿ ಸಚಿವರ ನಡುವೆ ನಡೆದಿದ್ದ ಪೈಪೋಟಿ, ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಗಳು ಹಾಗೂ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆದ ಸಮಾಲೋಚನೆಗಳ ಬಳಿಕ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ. ಅನುಭವ, ಪ್ರಾದೇಶಿಕ ಸಮತೋಲನ ಹಾಗೂ ಪಕ್ಷದ ಆಂತರಿಕ ಲೆಕ್ಕಾಚಾರಗಳನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ಯಾರಿಗೆ ಯಾವ ಖಾತೆ?

  • ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ಎಚ್.ಸಿ. ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
  • ಕೆ.ಎಚ್. ಮುನಿಯಪ್ಪ – ಸಾಮಾಜಿಕ ಕಲ್ಯಾಣ ಇಲಾಖೆ
  • ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • ಬಸವಂತಪ್ಪ – ಬಂದರು ಮತ್ತು ಮೀನುಗಾರಿಕೆ ಇಲಾಖೆ
  • ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಇಲಾಖೆ
  • ಕೆ.ಸಿ. ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • ಬಿ.ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ
  • ಯು.ಟಿ. ಖಾದರ್ – ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆ
  • ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ
  • ಡಾ. ಅಜಯ್ ಸಿಂಗ್ – ಅರಣ್ಯ ಇಲಾಖೆ
  • ಎಸ್.ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
  • ಪುಟ್ಟರಂಗ ಶೆಟ್ಟಿ – ಪಶು ಸಂಗೋಪನೆ

ಪ್ರಮುಖ ಖಾತೆಗಳ ಮೇಲೆ ಸಚಿವರ ಕಣ್ಣು

ನೂತನ ಸಚಿವರಿಗೆ ಖಾತೆ ಹಂಚಿಕೆ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಹಲವು ನಾಯಕರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಕೃಷಿ, ಶಿಕ್ಷಣ, ಆರೋಗ್ಯ, ಸಹಕಾರ ಸೇರಿದಂತೆ ಪ್ರಮುಖ ಇಲಾಖೆಗಳ ಜವಾಬ್ದಾರಿ ಪಡೆಯಲು ಸಚಿವರ ನಡುವೆ ಪೈಪೋಟಿ ನಡೆದಿತ್ತು ಎನ್ನಲಾಗಿತ್ತು.

ಹಿರಿಯ ನಾಯಕ ಲಕ್ಷ್ಮಣ್ ಸವದಿ ಅವರಿಗೆ ಸಹಕಾರ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಶಿಕ್ಷಣದಂತಹ ಪ್ರಮುಖ ಇಲಾಖೆ ದೊರೆತಿದೆ. ಯು.ಟಿ. ಖಾದರ್ ಅವರಿಗೆ ಆರೋಗ್ಯ ಇಲಾಖೆಯ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಜವಾಬ್ದಾರಿಯನ್ನೂ ನೀಡಲಾಗಿದೆ.

ಇನ್ನು ಚಲುವರಾಯಸ್ವಾಮಿ ಅವರಿಗೆ ಕೃಷಿ ಇಲಾಖೆ ನೀಡಲಾಗಿದ್ದು, ರಾಜ್ಯದ ರೈತರ ಸಮಸ್ಯೆಗಳು, ಕೃಷಿ ವಲಯದ ಅಭಿವೃದ್ಧಿ ಹಾಗೂ ಸರ್ಕಾರದ ಕೃಷಿ ಯೋಜನೆಗಳ ಅನುಷ್ಠಾನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img