HomeGadag Newsಯೋಜನೆಗಳ ಸೌಲಭ್ಯ ದುರುಪಯೋಗವಾಗದಿರಲಿ

ಯೋಜನೆಗಳ ಸೌಲಭ್ಯ ದುರುಪಯೋಗವಾಗದಿರಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಬೇಕು. ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾ ವಹಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಜರುಗಿದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಲಾಖೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯ ಪ್ರಗತಿಯ ಕುರಿತು ನಿಖರ ಮಾಹಿತಿ ಒದಗಿಸಬೇಕು. ಗೃಹ ಲಕ್ಷ್ಮೀ ಹಾಗೂ ಯುವನಿಧಿ ಯೋಜನೆಯ ಕುರಿತು ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕು. ನಗರದ ಹಳೇ ಬಸ್ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ನಗರದ ವಿವಿಧ ಪ್ರದೆಶಗಳಿಂದ ಜಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದು, ಹೆಚ್ಚಿನ ಬಸ್‌ಗಳನ್ನು ಕಲ್ಪಿಸಲು ಕೆಎಸ್‌ಆರ್‌ಟಿಸಿಯವರು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಭೆ ಕರೆದು ಸರ್ವೇ ಕಾರ್ಯ ಚುರುಕುಗೊಳಿಸಬೇಕೆಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಡಿಸೆಂಬರ್ 2024ರವರೆಗೆ ಗದಗ ತಾಲೂಕಿನಲ್ಲಿ 77823 ನೋಂದಣಿಯಾದ ಅರ್ಜಿಗಳ ಪೈಕಿ 76521 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ. 99.66 ಪ್ರಗತಿ ಸಾಧಿಸಿದೆ. ಜಿಲ್ಲೆಯಲ್ಲಿ ವಾ.ಕ.ರ.ಸಾ ಸಂಸ್ಥೆಯಿಂದ ಗದಗ ಘಟಕದಲ್ಲಿ 11-6-2023ರಿಂದ 05-03-2025ರವರೆಗೆ 12578976 ಪುರುಷ ಪ್ರಯಾಣಿಕರು ಹಾಗೂ 17681952 ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟಾರೆ 30260928 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಗದಗ ಘಟಕದಲ್ಲಿ 5193.21 ಲಕ್ಷ ರೂ. ಮಹಿಳಾ ಪ್ರಯಾಣಿಕರ ಆದಾಯವಾಗಿದೆ. ಬೆಟಗೇರಿ ಘಟಕದಲ್ಲಿ 3149.11 ಲಕ್ಷ ಮಹಿಳಾ ಪ್ರಯಾಣಿಕರ ಆದಾಯವಾಗಿದೆ.

ಅನ್ನಭಾಗ್ಯ ಯೋಜನೆಯಡಿ ಗದಗ ತಾಲೂಕಿನಲ್ಲಿ ನವೆಂಬರ್ 2024ರ ಮಾಹೆಯಲ್ಲಿ ಗದಗ ಪಡಿತರ ಪ್ರದೇಶದಲ್ಲಿ ಫಲಾನುಭವಿಗಳಿಗೆ 4,02,27,440 ರೂ.ಗಳನ್ನು ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 28-2-2025ರವರೆಗೆ ಗದಗ ಗ್ರಾಮೀಣ ಉಪ ವಿಭಾಗದಲ್ಲಿ ಶೇ 99.33ರಷ್ಟು ಪ್ರಗತಿಯಾಗಿದೆ. ಗದಗ ಶಹರ ಉಪವಿಭಾಗದಲ್ಲಿ ಶೇ 99.47 ಪ್ರಗತಿಯಾಗಿದೆ.

ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ ಜನೆವರಿ 2025ರವರೆಗೆ 1704 ಫಲಾನುಭವಿಗಳ ನೋಂದಣಿಯಾಗಿದ್ದು, 826 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ 24,57,000 ರೂ. ವರ್ಗಾವಣೆಯಾಗಿರುತ್ತದೆ ಎಂದು ಸಂಬಂಧಿತ ಅಧಿಕಾರಿಗಳು ಮಾಹಿತಿ ಒದಗಿಸಿದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಸಾವಿತ್ರಿ ಹೂಗಾರ, ಶರೀಫ್, ತಾ.ಪಂ ಮ್ಯಾನೇಜರ್ ರುದ್ರಪ್ಪ ಬಾವಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಿತ ಅಧಿಕಾರಿಗಳು ಹಾಜರಿದ್ದರು.

ಅನ್ನಭಾಗ್ಯ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಆಹಾರ ಇಲಾಖೆಯ ಅಧಿಕಾರಿಗಳು ಪಡಿತರ ಅಂಗಡಿದಾರರ ಜೊತೆಗೆ ಸಭೆ ನಡೆಸಬೇಕು. ಅನ್ನಭಾಗ್ಯದ ಅಕ್ಕಿಯು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ವೃಥಾ ಅಕ್ಕಿಯು ಪೋಲಾಗದಂತೆ ಜಾಗೃತೆ ವಹಿಸಬೇಕು. ನಗರದಲ್ಲಿನ ಬೀದಿ ದೀಪಗಳ ಕಂಬದ ದುರಸ್ತಿಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಜನನಿಬಿಡ ಪ್ರದೇಶಗಳಲ್ಲಿ ವಿದ್ಯುತ್ ಅವಘಡಗಳಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ಅಶೋಕ ಮಂದಾಲಿ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!