ಗದಗ: ಗದಗ-ಬೆಟಗೇರಿ ವ್ಯಾಪ್ತಿಯ ವಾರ್ಡ್ ನಂ. 35ರಲ್ಲಿ ನೀಲಮ್ಮತಾಯಿ ಮಠದ ಹತ್ತಿರ ಸಿಸಿ ರಸ್ತೆ ಕಾಮಗಾರಿಗೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
Trending Now



