HomeGadag Newsನೂತನ ಪದಾಧಿಕಾರಿಗಳ ಆಯ್ಕೆ

ನೂತನ ಪದಾಧಿಕಾರಿಗಳ ಆಯ್ಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆಡಳಿತ ಮಂಡಳಿಯ ಸಭೆಯನ್ನು ಮಂಡಳಿಯ ಸಭಾಗೃಹದಲ್ಲಿ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ 2025-2026ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿ, ಸಂಸ್ಥೆಯ ಮಾಜಿ ಅಧ್ಯಕ್ಷರುಗಳ ಪರವಾಗಿ ಮೋಹನ ತೋಟಪ್ಪ ಕೋಟಿ ಸಭೆಯಲ್ಲಿ ಪ್ರಸ್ತಾಪಿಸಿದರು.

ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು. ನೂತನ ಅಧ್ಯಕ್ಷರಾಗಿ ಶರಣಬಸಪ್ಪ ಎಸ್.ಗುಡಿಮನಿ, ಪ್ರಥಮ ಉಪಾಧ್ಯಕ್ಷರಾಗಿ ಜಯದೇವ ಎಂ.ಮೆಣಸಗಿ, ದ್ವಿತೀಯ ಉಪಾಧ್ಯಕ್ಷರಾಗಿ ಪ್ರಕಾಶ ಎಸ್.ಉಗಲಾಟದ, ತೃತೀಯ ಉಪಾಧ್ಯಕ್ಷರಾಗಿ ಸಿದ್ದರಾಮಪ್ಪ ಎ.ಉಮಚಗಿ, ಗೌರವ ಕಾರ್ಯದರ್ಶಿಗಳಾಗಿ ಚನ್ನವೀರಪ್ಪ ಪ್ರಭಣ್ಣ ಹುಣಸಿಕಟ್ಟಿ, ಸಹ ಗೌರವ ಕಾರ್ಯದರ್ಶಿಗಳಾಗಿ ರಾಘವೇಂದ್ರ ಎಸ್.ಕಾಲವಾಡ ಹಾಗೂ ಅಶೋಕ ಎಸ್.ಸಂಕಣ್ಣವರ, ಕೋಶಾಧ್ಯಕ್ಷರಾಗಿ ಅರವಿಂದ ಎಸ್.ಕಾಮತ ಆಯ್ಕೆಯಾದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ತಾತನಗೌಡ ಎಸ್.ಪಾಟೀಲ ವಹಿಸಿದ್ದರು ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಚನ್ನವೀರಪ್ಪ ಪ್ರ.ಹುಣಸಿಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!