ವಿಜಯಸಾಕ್ಷಿ ಸುದ್ದಿ, ರೋಣ: ಅಖಿಲ ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ರೋಣ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಮೆಣಸಗಿಯ ಶರಣಬಸವೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಬಿ. ಮೇಗಲಮನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಳೆಆಲೂರಿನ ಯಚೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಕೆ. ಆಡಿನ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಅಧ್ಯಕ್ಷ ಬಸವರಾಜ ಕೊರ್ಲಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



