HomePolitics Newsಅರ್ಹರು ಕಡ್ಡಾಯವಾಗಿ ಮತ ಚಲಾಯಿಸಿ : ಎಂ.ಆರ್. ಮಾದರ

ಅರ್ಹರು ಕಡ್ಡಾಯವಾಗಿ ಮತ ಚಲಾಯಿಸಿ : ಎಂ.ಆರ್. ಮಾದರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಸಂಕಲ್ಪ ತೊಡುವ ಮೂಲಕ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳಿಸಬೇಕು ಎಂದು ಬಟ್ಟೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಂ.ಆರ್. ಮಾದರ ಹೇಳಿದರು.

ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಗ್ರಾಮದ ಉದ್ಯೋಗ ಖಾತ್ರಿ ಸಮುದಾಯ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆ ಪ್ರಜಾಪ್ರಭುತ್ವದ ಹಬ್ಬವೆಂದು ಭಾವಿಸಿ ಸಂಭ್ರಮಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರು ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ ಎಂದರು. ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು.

ತಾಲೂಕಿನ ಗ್ರಾಮೀಣ ಪ್ರದೇಶದ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರಣೆ ನೀಡುವ ಕಾರ್ಯ ಮಾಡುತ್ತಿದ್ದೇವೆ. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನಕ್ಕೆ ನಿಗದಿ ಪಡಿಸಲಾಗಿದೆ. ಎಲ್ಲರೂ ಪ್ರಜಾಪ್ರಭುತ್ವದ ಮತದಾನದಲ್ಲಿ ಭಾಗಿಯಾಗುವಂತೆ ತಿಳಿಸಿದರು.

ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಿಇಒ ಹಾಲೇಶ ಪಾಟೀಲ, ಗ್ರಾಮ ಕಾಯಕ ಮಿತ್ರ ಗಂಗಮ್ಮ ಹರಿಜನ, ಗ್ರಾ.ಪಂ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು ಇತರರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!