ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗಿದೆ ಎಂಬ ಆರೋಪದ ಬೆನ್ನಲ್ಲೇ ನಡೆಸಲಾದ ಗುಣಮಟ್ಟ ಪರೀಕ್ಷೆಯ ವರದಿ ಹೊರಬಿದ್ದಿದೆ.
ಪರೀಕ್ಷೆಯಲ್ಲಿ ಮಿಲ್ಕ್ ಪೌಡರ್ ಸುರಕ್ಷಿತವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಈ ಹಿಂದೆ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಉತ್ಪನ್ನದ ಗುಣಮಟ್ಟವನ್ನು ಪರೀಕ್ಷಿಸುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದರು.
ಸೆಪ್ಟೆಂಬರ್ 26ರಂದು ಮಾದರಿ ಸಂಗ್ರಹ:
ಆರೋಗ್ಯ ಸಚಿವರ ಸೂಚನೆಯಂತೆ ಸೆಪ್ಟೆಂಬರ್ 26ರಂದು ಕೆಎಂಎಫ್‌ನ ಡೈರಿಗಳಿಂದ ಮಿಲ್ಕ್ ಪೌಡರ್ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಬಳಿಕ ಈ ಮಾದರಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರೀಕ್ಷೆಗೆ ಕಳುಹಿಸಲಾಗಿತ್ತು.
ಇದೀಗ ಪ್ರಯೋಗಾಲಯದ ವರದಿ ಬಂದಿದ್ದು, ಪರೀಕ್ಷಿಸಿದ ಮಿಲ್ಕ್ ಪೌಡರ್ ಮಾದರಿಗಳು ಸುರಕ್ಷಿತವಾಗಿವೆ ಎಂದು ತಿಳಿದುಬಂದಿದೆ. ಈ ವರದಿಯಿಂದ ನಂದಿನಿ ಮಿಲ್ಕ್ ಪೌಡರ್‌ನ ಗುಣಮಟ್ಟದ ಕುರಿತು ಎದ್ದಿದ್ದ ಆರೋಪಗಳ ಬಗ್ಗೆ ಸ್ಪಷ್ಟನೆ ದೊರೆತಂತಾಗಿದೆ.



