HomeKarnataka Newsಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಮೈಸೂರು: ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳ ಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದರು.

ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ. ಸಂಘವು ಹಿಂದೆ ಜಮೀನು ಕೊಂಡ ದರದಲ್ಲಿಯೇ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಹಕಾರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮ ಎಂದು ತಿಳಿಸಿದ ಮುಖ್ಯಮಂತ್ರಿಗಳು ಸಂಘದ ಸದಸ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಶಿವರಾತ್ರಿ ರಾಜೇಂದ್ರ ಮಠದ ಅಧ್ಯಕ್ಷರಾದ ನಂತರ ಸ್ವಾಮೀಜಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಕರ್ನಾಟಕ ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಠದಲ್ಲಿಯೂ ಶಿಕ್ಷಣ ಕ್ಷೇತ್ರಗಳನ್ನು ಸ್ಥಾಪಿಸಿದ್ದಾರೆ. ಇದಕ್ಕೆ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಹಾಕಿದಾ ಅಡಿಪಾಯವೇ ಕಾರಣ. ಶಿಕ್ಷಣ ಬಹಳ ಮುಖ್ಯ ಎಂದರು.

ಮಹಿಳೆಯರಿಗೆ ಶಿಕ್ಷಣದ ಹಕ್ಕು ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ
ನಮ್ಮ ಸಮಾಜ ಸಾಮಾಜಿಕ ಜಾತಿ ವ್ಯವಸ್ಥೆಯಿಂದ ಕೂಡಿದೆ. ಈ ಕಾರಣದಿಂದ ಬಸವಣ್ಣನವರ ಕಾಲಕ್ಕಿಂತಲೂ ಹಿಂದೆ ಶೂದ್ರ ಜನಾಂಗದವರು ಮತ್ತು ಮಹಿಳೆಯರು, ಶಿಕ್ಷಣದಿಂದ ವಂಚಿತರಾಗಿದ್ದರು. ಮಹಿಳೆಯರಿಗೆ ಶಿಕ್ಷಣದ ಹಕ್ಕು ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ ಎನ್ನುವುದನ್ನು ನಾವು ಮರೆಯಬಾರದು.

ಅನುಭವ ಮಂಟಪ ಎಂದು ಹೆಸರಿಟ್ಟಿರುವುದು ಸೂಕ್ತವಾಗಿದೆ ಎಂದು ಅಭಿಪ್ರಾಯ ಪಟ್ಟ ಮುಖ್ಯಮಂತ್ರಿಗಳು, ಅನುಭವ ಮಂಟಪ ಜಗತ್ತಿನ ಮೊದಲನೇ ಸಂಸತ್ತು ಎಂದು ಕರೆಸಿಕೊಂಡಿದೆ. ಈ ಸಂಸತ್ತಿನಲ್ಲಿ ಜಾತಿ, ಧರ್ಮಗಳು ಇರಲಿಲ್ಲ. ಎಲ್ಲಾ ಧರ್ಮದವರೂ ಇಲ್ಲಿನ ಸಂಸತ್ತಿನಲ್ಲಿ ಪಾಲ್ಗೊಳ್ಳುತ್ತಿದ್ದರು. ಬಸವಣ್ಣನವರು ಅದಕ್ಕಾಗಿಯೇ ಅನುಭವ ಮಂಟಪ ನಿರ್ಮಿಸಿ ಜನರ ಸಾಮಾಜಿಕ ಅನುಭವಗಳನ್ನು ಚರ್ಚೆ ಮಾಡಿ ಅದಕ್ಕೆ ರೂಪ ಕೊಡುವ ಕೆಲಸವನ್ನು ಮಾಡಿದ್ದರು ಎಂದರು.

ಬಸವಣ್ಣ ವಿಶ್ವ ಮಾನವ
ಸ್ವತಂತ್ರ ಭಾರತದಲ್ಲಿ ಇಂದು ಸಂಸತ್ತು, ವಿಧಾನಸಭೆಗಳಾಗಿವೆ. ಜನಪ್ರತಿನಿಧಿಗಳು ಸಂಸತ್ತು, ವಿಧಾನಸಭೆಗಳಲ್ಲಿ ಚರ್ಚೆ ಮಾಡುತ್ತೇವೆ. ಇಂಥ ವ್ಯವಸ್ಥೆ ಬಸವಣ್ಣನವರ ಕಾಲದಲ್ಲಿಯೇ ಇತ್ತು. ಸಮಾಜದ ಭವಿಷ್ಯದ ಬಗ್ಗೆ, ಕೊಳಕುಗಳನ್ನು ತೆಗೆದುಹಾಕುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸಲು ಆದೇಶ ಹೊರಡಿಸಲಾಗಿತ್ತು. ಈ ಬಾರಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ತೀರ್ಮಾನಿಸಿದೆ ಎಂದರು.

ಜಾತ್ಯತೀತ ಸಮಾಜ ನಿರ್ಮಾಣದ ಕನಸು

ಬಸವಣ್ಣನವರು ಯಾವುದೇ ಜಾತಿ, ಧರ್ಮ, ಪಂಗಡಕ್ಕೆ ಸೇರಿದವರಲ್ಲ. ಅವರು ವಿಶ್ವ ಮಾನವರಾಗಿದ್ದವರು. ಸಮಾಜ ಜಾತ್ಯತೀತ, ಅಸಮಾನತೆಯಿಂದ ಮುಕ್ತವಾಗಬೇಕೆಂಬ ಕನಸನ್ನು ಕಂಡಿದ್ದರು. ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದಷ್ಟೇ ಅಲ್ಲದೇ ಅನುಭವ ಮಂಟಪದಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳನ್ನು ಒದಗಿಸಿದ್ದರು.

ತಾವು ಅಧ್ಯಕ್ಷರಾಗದೇ ತಳಸಮುದಾಯದಿಂದ ಬಂದ ಅಲ್ಲಮ ಪ್ರಭುವನ್ನು ಅಧ್ಯಕ್ಷನನ್ನಾಗಿ ಮಾಡಿದರು. ಜಾತ್ಯತೀಯ, ಸಮಾನತೆ, ಸ್ವತಂತ್ರ, ಮೇಲು ಕೀಳು ಎಂಬ ಬೇಧಭಾವವಿಲ್ಲದೆ ಎಲ್ಲರೂ ಮನುಷ್ಯರಾಗಿ ಬಾಳುವ ಕನಸು ಬಸವಣ್ಣ ಕಂಡಿದ್ದರು. ಇದಕ್ಕೂ ಹಿಂದೆ ಬುದ್ಧ ಕೂಡ ಇಡೀ ಪ್ರಯತ್ನ ಮಾಡಿದ್ದರು. ಇಷ್ಟೆಲ್ಲಾ ಆದರೂ ಜಾತಿ ವ್ಯವಸ್ಥೆ ನಮ್ಮಲ್ಲಿ ಬೇರೂರಿದೆ. ಸ್ವಾತಂತ್ರ್ಯ ದೊರೆತು 78 ವರ್ಷಗಳಾದರೂ ಜಾತಿ ಹೋಗಿಲ್ಲವೆಂದರೆ ಜಾತಿ ಅಷ್ಟು ಆಳವಾಗಿ ಬೇರೂರಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!