HomeKarnataka Newsಫೇಕ್ ನ್ಯೂಸ್ ವೈರಲ್: ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ - ಸಿಎಂ ಕಚೇರಿ ಸ್ಪಷ್ಟನೆ

ಫೇಕ್ ನ್ಯೂಸ್ ವೈರಲ್: ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ – ಸಿಎಂ ಕಚೇರಿ ಸ್ಪಷ್ಟನೆ

For Dai;y Updates Join Our whatsapp Group

Spread the love

ಬೆಂಗಳೂರು:-ಸಾಲುಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಚಾರವಾಗಿ ಇದೀಗ ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ. ಸಾಲುಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸರ್ಕಾರಿ ಆದೇಶದಂತಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ತೀವ್ರ ಗೊಂದಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಕಚೇರಿ ಇದಕ್ಕೆ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವ್ಯಾಟ್ಸಪ್ ಗ್ರೂಪ್ ಗಳಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ: 14.11.2025 ರಂದು ಸಾಲುಮರದ ತಿಮ್ಮಕ್ಕರವರು ನಿಧನರಾದ ಹಿನ್ನೆಲೆಯಲ್ಲಿ ಇವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಮಂಡ್ಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಎಂದು ತಿಳಿಸಿರುವ ಅಧಿಸೂಚನೆಯೂ ನೈಜ್ಯತೆಯಿಂದ ಕೂಡಿರುವುದಿಲ್ಲ ಹಾಗೂ ಇದು ನಕಲಿ ಆಗಿರುತ್ತದೆ ಎಂಬುದಾಗಿ ಹೇಳಿದೆ.

ಸದರಿ ನಕಲಿ ಅಧಿಸೂಚನೆಯಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ನೈಜತೆಯಿಂದ ಕೂಡಿರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯು ಸ್ಪಷ್ಟ ಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!