HomeKarnataka Newsವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಭೀತಿ: ಒಂದೇ ತಿಂಗಳಲ್ಲಿ 3 ಬಾರಿ ಕಂಪಿಸಿದ ಭೂಮಿ, ಜನರಲ್ಲಿ...

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಭೀತಿ: ಒಂದೇ ತಿಂಗಳಲ್ಲಿ 3 ಬಾರಿ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ!

For Dai;y Updates Join Our whatsapp Group

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಾಣಿಸಿಕೊಳ್ಳುತ್ತಿದ್ದ ಭೂಕಂಪನದ ಅನುಭವ ಇದೀಗ ಮತ್ತೆ ಶುರುವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಸೆಪ್ಟೆಂಬರ್ ಒಂದೇ ತಿಂಗಳಿನಲ್ಲಿ ಬಸವನಬಾಗೇವಾಡಿ ತಾಲೂಕಿನಲ್ಲಿ ಮೂರು ಬಾರಿ ಭೂಮಿ ಕಂಪಿಸಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ.

ಕಳೆದ ಕೆಲವು ವರ್ಷಗಳಿಂದ ಜಿಲ್ಲೆಯ ತಿಕೋಟಾ, ಕೊಲ್ಹಾರ, ನಿಡಗುಂದಿ ಹಾಗೂ ಬಸವನಬಾಗೇವಾಡಿ ಭಾಗಗಳಲ್ಲಿ ಪದೇ ಪದೇ ಲಘು ಭೂಕಂಪನಗಳು ವರದಿಯಾಗುತ್ತಲೇ ಇದ್ದು, ಇದೀಗ ಮತ್ತೆ ಕಂಪನಗಳು ಮರುಕಳಿಸಿವೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಮಾಹಿತಿಯಂತೆ, ಸೆಪ್ಟೆಂಬರ್ 30ರ ನಸುಕಿನ ಜಾವ 2:00 ಗಂಟೆಯ ಸುಮಾರಿಗೆ ಬಸವನಬಾಗೇವಾಡಿ ಪಟ್ಟಣದ ಈಶಾನ್ಯ ದಿಕ್ಕಿನಲ್ಲಿ ಸುಮಾರು 3.9 ಕಿ.ಮೀ ದೂರದ ಕೇಂದ್ರಬಿಂದುವಿನಲ್ಲಿ ಭೂಕಂಪನ ಸಂಭವಿಸಿದೆ. ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿರುವ ಈ ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.5ರಷ್ಟು ದಾಖಲಾಗಿದೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 28ರ ಮಧ್ಯರಾತ್ರಿ 12:26ಕ್ಕೆ ದಿಂದಿವಾರ ಗ್ರಾಮ ಪಂಚಾಯಿತಿ ಕಚೇರಿಯಿಂದ 1.1 ಕಿ.ಮೀ ನೈಋತ್ಯ ದಿಕ್ಕಿನಲ್ಲಿ 10 ಕಿ.ಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪನವಾಗಿತ್ತು. ಹಾಗೆಯೇ ಸೆಪ್ಟೆಂಬರ್ 17ರಂದು ನಸುಕಿನ ಜಾವ 5:30ರ ಸುಮಾರಿಗೆ ಇಂಗಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 3.7 ತೀವ್ರತೆಯ ಕಂಪನ ದಾಖಲಾಗಿತ್ತು.

ಒಂದೇ ತಿಂಗಳಲ್ಲಿ ಸತತವಾಗಿ ಮೂರು ಬಾರಿ ಭೂಮಿ ಕಂಪಿಸಿರುವುದರಿಂದ ತಾಲೂಕಿನ ಜನತೆ ಭಯಭೀತರಾಗಿದ್ದಾರೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಭೂಕಂಪನ ತಜ್ಞರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಭೂಕಂಪನಕ್ಕೆ ನಿಖರ ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಿ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img