ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಸಮೇತ ಚಾಲಕ ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ.
48 ವರ್ಷದ ಇಬ್ರಾಹಿಂ ಮೃತ ದುರ್ದೈವಿ. ಈತ ವ್ಯಾಪಾರ ಮುಗಿಸಿಕೊಂಡು ಒಮಿನಿ ಕಾರಿನಲ್ಲಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಸಮೇತ ಚಾಲಕ ಸುಟ್ಟು ಹೋಗಿದ್ದಾನೆ. ಮೃತ ದೇಹವನ್ನು ಚಿಂತಾಮಣಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಕೆಂಚಾರ್ಲಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



