HomeEntertainmentಕುಂಭಮೇಳಕ್ಕೆ ತೆರಳಿದ್ದ ಬೀದರ್’ನ ಐವರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ...

ಕುಂಭಮೇಳಕ್ಕೆ ತೆರಳಿದ್ದ ಬೀದರ್’ನ ಐವರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ಬೀದರ್ ಮೂಲದ ಒಂದು ಕುಟುಂಬದ 12 ಜನರು ಪ್ರಯಾಗರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ತೆರಳುತ್ತಿದ್ದರು. ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಆರು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು,

8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!