HomeKarnataka Newsಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ನಾಪತ್ತೆ..! ಓರ್ವನ ಶವ ಪತ್ತೆ

ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ನಾಪತ್ತೆ..! ಓರ್ವನ ಶವ ಪತ್ತೆ

For Dai;y Updates Join Our whatsapp Group

ಕಾರವಾರ: ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರೋ ಘಟನೆ ನಡೆದಿದೆ. ರವಿವಾರ ರಜೆಯ ಸಲುವಾಗಿ ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಓರ್ವನ ಶವ ಪತ್ತೆಯಾಗಿದೆ. ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್‌ ರೆಹಮಾನ್‌ (44), ರಾಮನಬೈಲಿನ ನಾದಿಯಾ ನೂರ್ ಅಹಮದ್‌ ಶೇಖ್‌ (20),

ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಟಾ ತಬಸುಮ್ (21), ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(22) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮ‌ರ್ ಸಿದ್ದಿಕ್‌ ನಾಪತ್ತೆಯಾಗಿದ್ದಾರೆ. ಇದ್ರಲ್ಲಿ ಸಲೀಮ್ ಕಲೀಲ್ ರೆಹಮಾನ್ (44) ಮೃತ ವ್ಯಕ್ತಿಯ ‌ಶವ ಪತ್ತೆಯಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗ್ತಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img