ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ತೀವ್ರಗೊಂಡಿದೆ. ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಎಸ್ಐಟಿ ಅನಾಮಿಕ ಸೇರಿದಂತೆ ಕೆಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಇದರ ನಡುವೆ ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಸ್ಟೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ. ಕೆಲವು ನಂಬಲರ್ಹ ಮೂಲಗಳಿಂದ ಫಾರಿನ್ ಫಂಡ್ ಬಂದಿದೆ ಅಂತ ನಮಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.
ಎನ್ಐಎ ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ. ಈಗಾಗಲೇ ಷಡ್ಯಂತ್ರ ಇದೆ ಅಂತ ನಾವೂ ಹೇಳ್ತಿದೀವಿ, ಕಾಂಗ್ರೆಸ್‌ನವ್ರೂ ಹೇಳ್ತಿದ್ದಾರೆ. ಆದ್ದರಿಂದ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಹೇಳಿದ್ದಾರೆ.



