ಹಾವೇರಿ: ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿಯಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಚಿರತೆ ಪತ್ತೆಯಾಗಿದ್ದು,
ಕಳೆದ ಒಂದು ತಿಂಗಳಿನಿಂದ ಇದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿತ್ತು. ಚಿರತೆಯ ಭಯದಿಂದ ಜನರು ತಮ್ಮ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.
ಕಳೆದ ಒಂದು ವಾರದ ಹಿಂದೆ ತೋಟದ ಮನೆಯ ಸಿಸಿಟಿವಿಯಲ್ಲಿ ಚಿರತೆಯ ದೃಶ್ಯ ಸೆರೆಯಾಗಿತ್ತು. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಸದ್ಯ ಚಿರತೆ ಸೆರೆಯಿಂದ ಸುತ್ತಮುತ್ತಲಿನ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.



