HomeKarnataka Newsಧಾರವಾಡ| ಜಾಮೀನು ಪಡೆದು 7 ವರ್ಷ ಕೋರ್ಟ್‌ಗೆ ಹಾಜರಾಗದೇ ಪರಾರಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

ಧಾರವಾಡ| ಜಾಮೀನು ಪಡೆದು 7 ವರ್ಷ ಕೋರ್ಟ್‌ಗೆ ಹಾಜರಾಗದೇ ಪರಾರಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

For Dai;y Updates Join Our whatsapp Group

Spread the love

ಧಾರವಾಡ: ಜಾಮೀನು ಪಡೆದು ಕೋರ್ಟ್‌ಗೆ ಹಾಜರಾಗದೇ ಬರೋಬ್ಬರಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅರೆಸ್ಟ್ ಆಗಿದ್ದಾನೆ.

ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಬಂಧನ ಆಗಿದೆ. ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶ್ರೀಕಾಂತ್, ಮಹಾನಗರ ಪಾಲಿಕೆ ಸದಸ್ಯ ಕೂಡ ಆಗಿದ್ದ. ಈತ ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಸಿಸಿ ನಂ-317/2017 ರಲ್ಲಿ 2019 ರಲ್ಲಿ ಶಿಕ್ಷೆಗೆ ಗುರಿಯಾಗಿ, ಜಾಮೀನು ಪಡೆದುಕೊಂಡಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ.

ಶ್ರೀಕಾಂತನ ಮೇಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಒಟ್ಟು 11-138 ಎನ್‌ಐ ಆ್ಯಕ್ಟ್ ಹಾಗೂ 1 ಕ್ರಿಮಿನಲ್ ಕೇಸ್ ಇದೆ. ಈತ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಕೂಡ ಆಗಿದ್ದಾನೆ. ಈತನನ್ನು ಪತ್ತೆ ಮಾಡುವ ಸಲುವಾಗಿ ಧಾರವಾಡ ಉಪನಗರ ಠಾಣೆ ಪೊಲೀಸರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು.

ಮಾ.15 ರಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಧಾರವಾಡ ನಗರದ ಹೊರವಲಯದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!