HomeIndia Newsಪತನಗೊಂಡ ವಿಮಾನದಲ್ಲಿದ್ದರು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ!

ಪತನಗೊಂಡ ವಿಮಾನದಲ್ಲಿದ್ದರು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ!

For Dai;y Updates Join Our whatsapp Group

Spread the love

ಗುಜರಾತ್‌: ಇಂದು ಮಧ್ಯಾಹ್ನ ಗುಜರಾತ್ ಅಹಮದಾಬಾದ್ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ಕಂಡುಬಂದಿದೆ. ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ.

ಮೂಲಗಳ ಪ್ರಕಾರ, ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಇದ್ದರು ಎಂದು ಮೂಲಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ದಿತ್ತು. ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಘಟನಾ ಪ್ರದೇಶದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರಕ್ಕೆ ಹಾರುವುದನ್ನು ತೋರಿಸಿವೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!