ಬೆಂಗಳೂರು: ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ತಡರಾತ್ರಿಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ವರ್ಷ ಅಷ್ಟೇ ಅಂದ್ರೆ 2024ರ ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯವಾಗಿ ಡಿಸ್ಚಾರ್ಜ್ ಆಗಿದ್ದರು.



