ಹುಬ್ಬಳ್ಳಿ: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಬಾಂಗ್ಲಾದೇಶ ಮೂಲದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಕಾನೂನುಬಾಹಿರವಾಗಿ ದೇಶ ಪ್ರವೇಶಿಸಿ, ಯಾವುದೇ ದಾಖಲೆಗಳಿಲ್ಲದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪ ಇವರ ಮೇಲಿದೆ.
ಆರ್‌ಪಿಎಫ್ ಸಿಬ್ಬಂದಿಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ, ಬಂಧಿತರ ಬಳಿ ಪಾಸ್‌ಪೋರ್ಟ್, ವೀಸಾ ಸೇರಿದಂತೆ ಯಾವುದೇ ಗುರುತಿನ ದಾಖಲೆಗಳು ಪತ್ತೆಯಾಗಿಲ್ಲ. ಬಳಿಕ ನಾಲ್ವರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಆರಂಭಿಸಲಾಗಿದೆ.
ಬಂಧಿತರಿಂದ ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಠಾಣೆಯಲ್ಲಿ ವಿಚಾರಣೆ ಮುಂದುವರಿದಿದ್ದು, ದೇಶ ಪ್ರವೇಶದ ಹಾದಿ, ಸಂಪರ್ಕ ಜಾಲ ಹಾಗೂ ಇತರ ಮಾಹಿತಿ ಕಲೆಹಾಕಲಾಗುತ್ತಿದೆ. ಪ್ರಕರಣ ಭದ್ರತಾ ದೃಷ್ಟಿಯಿಂದ ಗಂಭೀರ ಸ್ವರೂಪ ಪಡೆದುಕೊಂಡಿದೆ.



