ದೇವನಹಳ್ಳಿ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿನಡೆದಿದೆ. ಕುಮಾರಪ್ಪ (60) ಮತ್ತು ಆತನ ಮಗ ಅರುಣ್(30) ಮನೆಯಲ್ಲೇ ಸಾವನ್ನಪ್ಪಿದ್ದು,
ಅಸ್ವಸ್ಥಗೊಂಡಿದ್ದ ಕುಮಾರಪ್ಪನ ಹೆಂಡತಿ ರಮಾ ಮತ್ತು ಮಗ ಅಕ್ಷಯ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಂದೆ ಕುಮಾರಪ್ಪ ನೇಣಿಗೆ ಶರಣಾಗಿದ್ದಾರೆ. ಅನಂತರ ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿದ್ದಾರೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಘಟನಾ ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದುರ್ದೈವಿಗಳ ಬಳಿ ಮದ್ಯದ ಬಾಟಲಿ ಮತ್ತು ವಿಷದ ಬಾಟಲಿ ಪತ್ತೆಯಾಗಿದ್ದು, ಇವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



