HomeKarnataka Newsಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ: ಶೀಘ್ರದಲ್ಲೇ ನೋಟ್ ಬುಕ್ ಕೊಡುಗೆ ಎಂದ ಮಧು ಬಂಗಾರಪ್ಪ

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ: ಶೀಘ್ರದಲ್ಲೇ ನೋಟ್ ಬುಕ್ ಕೊಡುಗೆ ಎಂದ ಮಧು ಬಂಗಾರಪ್ಪ

For Dai;y Updates Join Our whatsapp Group

ಬೆಂಗಳೂರು/ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಈ ಘೋಷಣೆ ಮಾಡಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಒದಗಿಸುವುದು ತಮ್ಮ ಕರ್ತವ್ಯ ಎಂದ ಸಚಿವರು, ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಿಲ್ಲದಿದ್ದರೂ ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದಾಗಿ ಹೇಳಿದರು. ಇದಕ್ಕೆ ಅಗತ್ಯ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಮಾತುಗಳನ್ನು ಆಲಿಸಿದ ಸಚಿವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಹಾಗೂ ಕಾಲೇಜಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಹಂಚಿಕೊಂಡಾಗ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳೊಂದಿಗೆ ಸಂವಾದ ನಡೆಸುವುದು ತಮಗೆ ಯಾವಾಗಲೂ ಖುಷಿ ಕೊಡುವ ವಿಚಾರ ಎಂದ ಸಚಿವರು, ನಿರೀಕ್ಷಿಸದ ಪ್ರಶ್ನೆ ಹಾಗೂ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಮುಂದಿಡುತ್ತಾರೆ, ಲವಲವಿಕೆಯ ವಾತಾವರಣ ಸೃಷ್ಟಿಸುತ್ತಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img