ಗದಗ: ನಗರದ ದೇವು ಫಿಟ್ನೆಸ್ನಲ್ಲಿ ಇತ್ತೀಚೆಗೆ ವ್ಯಾಯಾಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ದಿವಂಗತ ಪುನೀತ್ ರಾಜ್‍ಕುಮಾರ್ ಅವರ ಜನ್ಮ ದಿನದ ಪ್ರಯುಕ್ತ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಕೇಕ್ ಕತ್ತರಿಸಿ ಗೌರವ ಸಲ್ಲಿಸಿದರು. ಅವರ ಜೀವನ ಮೌಲ್ಯಗಳು, ಸಮಾಜ ಸೇವೆ ಮತ್ತು ಯುವಕರಿಗೆ ನೀಡಿದ ಪ್ರೇರಣೆಗಳನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರತಿಜ್ಞೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವು, ಪರಶುರಾಮ ಸುಂಕದ, ದೇವು ಮೇದಾರ ಹಾಗೂ ರವಿ ಭಂಡಾರಿ ಇದ್ದರು.



