ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಮತ್ತೊಮ್ಮೆ ತಮ್ಮ ಸರಳತೆ ಮತ್ತು ವಿಭಿನ್ನ ಸ್ಟೈಲ್‌ನಿಂದ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಹೈದರಾಬಾದ್‌ನಲ್ಲಿ ಭವ್ಯ ಗಣಪತಿ ಟ್ಯಾಟೂ ಹಾಕಿಸಿಕೊಂಡಿರುವ ಸಾನ್ವಿ, ಅದರ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದಾರೆ.
ಬೆನ್ನಿನ ಮೇಲೆ ಮೂಡಿಬಂದಿರುವ ಈ ಟ್ಯಾಟೂ ಕೆಂಪು ಮತ್ತು ಕಪ್ಪು ಬಣ್ಣದ ಕಾಂಬಿನೇಷನ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಸುಮಾರು 8 ಗಂಟೆಗಳ ಕಾಲ ಟ್ಯಾಟೂ ಪ್ರಕ್ರಿಯೆ ನಡೆದಿದ್ದು, ಸಾನ್ವಿ ಅದನ್ನು ತಾಳ್ಮೆಯಿಂದ ಪೂರ್ಣಗೊಳಿಸಿದ್ದಾರೆ.
ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮತ್ತು ಬಳಿಕದ ಜರ್ನಿಯನ್ನು ಸಾನ್ವಿ ವಿಡಿಯೋ ಮೂಲಕ ಹಂಚಿಕೊಂಡಿದ್ದು, “ಫೈನಲ್ ಲುಕ್ ಅದ್ಭುತವಾಗಿದೆ” ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾನ್ವಿ ಈಗಾಗಲೇ ಗಾಯಕಿಯಾಗಿ ಗುರುತಿಸಿಕೊಂಡಿದ್ದು, ‘ಮಸ್ತ್ ಮಲೈಕಾ’ ಹಾಡಿನ ಮೂಲಕ ಸಾಕಷ್ಟು ಗಮನ ಸೆಳೆದಿದ್ದರು. ಪಾಶ್ಚಾತ್ಯ ಮತ್ತು ಭಾರತೀಯ ಸಂಗೀತ ಎರಡರಲ್ಲೂ ಆಸಕ್ತಿ ಹೊಂದಿರುವ ಅವರು, ಸಂಗೀತ ಕ್ಷೇತ್ರದಲ್ಲೂ ತಮ್ಮದೇ ಗುರುತು ಮೂಡಿಸುತ್ತಿದ್ದಾರೆ.
ಸ್ಟಾರ್ ನಟನ ಮಗಳಾಗಿದ್ದರೂ ಅತಿರೇಕದ ಲೈಮ್‌ಲೈಟ್‌ನಿಂದ ದೂರ ಉಳಿಯುವ ಸಾನ್ವಿ, ತಮ್ಮ ಕಲೆ, ಸಂಗೀತ ಮತ್ತು ಸರಳ ವ್ಯಕ್ತಿತ್ವದ ಮೂಲಕ ಯುವಜನರಲ್ಲಿ ವಿಭಿನ್ನ ಫ್ಯಾನ್ ಬೇಸ್ ನಿರ್ಮಿಸಿಕೊಂಡಿದ್ದಾರೆ.



