ಬೆಂಗಳೂರು: ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ.
ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್‌ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇನ್ನೂ ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.



