HomePolitics Newsಕರ್ನಾಟಕದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ, ಪುಂಡರ ಹಾವಳಿ ಮಿತಿ ಮೀರಿದೆ: ಗೋವಿಂದ ಕಾರಜೋಳ!

ಕರ್ನಾಟಕದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ, ಪುಂಡರ ಹಾವಳಿ ಮಿತಿ ಮೀರಿದೆ: ಗೋವಿಂದ ಕಾರಜೋಳ!

For Dai;y Updates Join Our whatsapp Group

Spread the love

ಬೆಳಗಾವಿ:- ಕರ್ನಾಟಕದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ, ಪುಂಡರ ಹಾವಳಿ ಮಿತಿ ಮೀರಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷ ಆಯ್ತು. ಭಂಡತದನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡ್ತಿಲ್ಲ. ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಯಾವ ಗ್ಯಾರಂಟಿಯೂ ಸ್ಮಾರ್ಟ್ ಇಲ್ಲ, ಬೋಗಸ್ ಹೇಳಿ ವೋಟ್ ಹಾಕಿಸಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಜನರಿಗೆ ಮೋಸ ಮಾಡುತ್ತಿದ್ದಾರೆ. ಕಳೆದ ಬಾರಿ ಬಜೆಟ್ ಮಂಡನೆ ಮಾಡಿದ್ದರ ಪೈಕಿ ಒಂದೂವರೆ ಲಕ್ಷ ಕೋಟಿ ಹಣ ಬಾಕಿ ಇದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅತಿ ಹೆಚ್ಚು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದಿದ್ದಾರೆ. ಇದೇನಾ ಇವರು ನುಡಿದಂತೆ ನಡೆದಿದ್ದು? ನಾಡಿನ ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಳಜಿಯಿಲ್ಲ. ಅಭಿವೃದ್ಧಿ ಸಂಪೂರ್ಣವಾಗಿ ಶೂನ್ಯವಾಗಿದೆ. ನಾಡಿನ ಜನ ಸಂಕಷ್ಟದಲ್ಲಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೂಡಲೇ ಇವರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಬೇಕು ಎಂದು ಹರಿಹಾಯ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!