ತುಮಕೂರು:- 2024ನೇ ಸಾಲಿನ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಗೊ.ರು.ಚನ್ನಬಸಪ್ಪ ಆಯ್ಕೆ ಆಗಿದ್ದಾರೆ.
ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡಮಾಡುವ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಯು, 1 ಲಕ್ಷ ರೂ. ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಸಿದ್ಧಗಂಗಾ ಮಠದಲ್ಲಿ ಜನವರಿ 21ರಂದು ನಡೆಯುವ ಶಿವಕುಮಾರ ಸ್ವಾಮೀಜಿ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಗೊ.ರು.ಚ ಅವರು ಜಾನಪದ ಹಾಗೂ ಶರಣ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.



