ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಳಿತ ಕಂಡುಬಂದಿದ್ದು, ವಾರಾಂತ್ಯದಲ್ಲಿ ಎರಡೂ ಲೋಹಗಳ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು 145 ರೂಪಾಯಿ ಹೆಚ್ಚಳ ಕಂಡಿದ್ದು, ಬೆಳ್ಳಿ ದರವು 10 ರೂಪಾಯಿ ಏರಿಕೆಯಾಗಿದೆ.
ಕಳೆದ ಎರಡು ವಾರಗಳಿಂದ ತೂಗುಯ್ಯಾಲೆಯಂತೆ ಅಸ್ಥಿರತೆ ತೋರಿಸುತ್ತಿದ್ದ ಚಿನ್ನ-ಬೆಳ್ಳಿ ದರಗಳು, ಕಳೆದ ಹತ್ತು ದಿನಗಳಲ್ಲಿ ಗಮನಾರ್ಹ ಏರಿಕೆಯನ್ನು ದಾಖಲಿಸಿವೆ. ಚಿನ್ನದ ಬೆಲೆ ಈ ಅವಧಿಯಲ್ಲಿ ಸುಮಾರು 600 ರೂಪಾಯಿಗೂ ಅಧಿಕ ಏರಿಕೆಯಾಗಿದ್ದರೆ, ಬೆಳ್ಳಿ ಬೆಲೆ ಸುಮಾರು 25 ರೂಪಾಯಿಗಳಷ್ಟು ದುಬಾರಿಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 19ಕ್ಕೆ):
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,684 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ



