ಗೋಲ್ಡ್ ಪ್ರಿಯರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.
ನಿನ್ನೆ ಬುಧವಾರ ಗ್ರಾಮ್ಗೆ 500 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 90 ರೂ ತಗ್ಗಿದೆ. 15,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,49,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,63,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,49,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 5ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,353 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,990 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,265 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,353 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,990 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.



