HomePolitics Newsಬಿಜೆಪಿಯವರ ಮಾತು ಕೇಳಿ 15 ಬಿಲ್ʼಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿ.ಕೆ. ಶಿವಕುಮಾರ್

ಬಿಜೆಪಿಯವರ ಮಾತು ಕೇಳಿ 15 ಬಿಲ್ʼಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಖಾರವಾಗಿ ಉತ್ತರಿಸಿದರು.

ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ “ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ.

ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ” ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!