ಬೆಂಗಳೂರು:- ಹೊಸ ಹರ್ಷ ಅಂದ್ಕೊಂಡಿದ್ದ ಜನರಿಗೆ ಸರ್ಕಾರ ಮೊದಲ ಶಾಕ್ ಕೊಡಲು ಸಜ್ಜಾಗಿದೆ. ಎಲ್ಲಾ ಫ್ರೀ.. ಫ್ರೀ.. ಫ್ರೀ ಎಂದು ಅಧಿಕಾರಕ್ಕೆ ಬಂದ ಸರ್ಕಾರಕ್ಕೆ ತಮ್ಮ ಗ್ಯಾರಂಟಿಯೇ ಹೊರೆ ಆದಂತೆ ಕಾಣ್ತಿದೆ. ಎಸ್, ಶಕ್ತಿ ಯೋಜನೆಯನ್ನ ಸರಿದೂಗಿಸಲು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಸಜ್ಜಾಗಿದ್ದು, ಹೆಣ್ಮಕ್ಕಳಿಗೆ ಫ್ರೀ ಶಕ್ತಿ ಕೊಡ್ತಿರೋ ಸರ್ಕಾರ ಗಂಡು ಮಕ್ಕಳ ಬಜೆಟ್‌ಗೆ ಬರೆಹಾಕಲು ನಿರ್ಧರಿಸಿದೆ.
ಪಂಚ ಗ್ಯಾರಂಟಿಗಳ ಕೊಟ್ಟು ಕಾಂಗ್ರೆಸ್ ಸರ್ಕಾರ ಕೈ ಸುಟ್ಟುಕೊಂಡಂತೆ ಕಾಣ್ತಿದೆ. ಇದನ್ನ ಸರಿದೂಗಿಸಲು ಹೊಸ ವರ್ಷಕ್ಕೆ ಕಾಲಿಡ್ತಿದ್ದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಜನರಿಗೆ ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವ ಪ್ರಯತ್ನಕ್ಕೆ ಕೈ ಹಾಕಿದೆ. ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾರಿಗೆ ಪ್ರಯಾಣ ದರ ಏರಿಕೆಗೆ ಸಮ್ಮತಿ ಸೂಚಿಸಿದ್ದಾರೆ.
ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಶಕ್ತಿ ಯೋಜನೆ ಎಫೆಕ್ಟ್ನಿಂದಾಗಿ ಕರ್ನಾಟಕದ ನಾಲ್ಕು ಸಾರಿಗೆ ಸಂಸ್ಥೆಗಳಿಂದಲೂ ಬಸ್ ಪ್ರಯಾಣದ ದರ ಏರಿಕೆ ಬಗ್ಗೆ ಪ್ರಸ್ತಾಪವಿತ್ತು. ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದು ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಬಸ್ ಟಿಕೆಟ್ ದರ ಶೇಕಡಾ 15ರಷ್ಟು ಹೆಚ್ಚಳ ಮಾಡಲಾಗಿದೆ ಎಂದರು.
2020ರಂದು ಬಸ್ ಟಿಕೆಟ್ ಹೆಚ್ಚಳ ಮಾಡಲಾಗಿತ್ತು. ಐದು ವರ್ಷದಲ್ಲಿ ಈಗ ಡೀಸೆಲ್ ದರ ಹೆಚ್ಚಳವಾಗಿದೆ. ಖರ್ಚು ವೆಚ್ಚ ಕೂಡ ಹೆಚ್ಚಿಗೆ ಆಗಿದೆ. ಸಿಬ್ಬಂದಿ ವೆಚ್ಚ ಕೂಡ ಶೇ.18ರಷ್ಟು ಏರಿಕೆಯಾಗಿದೆ. ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಿಸಿಲ್ಲ. ಸಂಬಳ ಮತ್ತು ಸಾರಿಗೆ ಸಂಸ್ಥೆ ಉಳಿಯಬೇಕಲ್ವಾ. ಆದಾಯ ಹೆಚ್ಚಳವಾದರೂ ಖರ್ಚು ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಆದರೆ ಶಕ್ತಿ ಯೋಜನೆಯಿಂದ ನಮಗೆ ಲಾಭ ಆಗಿದೆ. ಬಿಜೆಪಿ ಸರ್ಕಾರ ಸಾವಿರಾರು ಕೋಟಿ ರೂ. ಸಾಲ ಬಿಟ್ಟು ಹೋಗಿದೆ. ನಮ್ಮ ಸರ್ಕಾರದಲ್ಲಿ ವೇತನಕ್ಕೆ ಯಾವುದೇ ಸಮಸ್ಯೆ ಆಗಿಲ್ಲ. ನಮ್ಮ ಸರ್ಕಾರದಲ್ಲಿ ಟೈಂ ಸರಿಯಾಗಿ ಸಂಬಳ ಆಗುತ್ತಿದೆ. ಹಿಂದಿನ ಸರ್ಕಾರದಲ್ಲಿ ಸಂಬಳದ ಸಮಸ್ಯೆಯಾಗಿತ್ತು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬಸ್ ಟಿಕೆಟ್ ದರ ಕಡಿಮೆ ಇದೆ ಎಂದಿದ್ದಾರೆ.
ಹಿಂದನ ಸರ್ಕಾರದ ಸಾಲ ತೀರಿಸುವ ಜವಾಬ್ದಾರಿ ಕೂಡ ಇದೆ. ಹತ್ತಿರ ಹತ್ತಿರ ಒಂದು ಸಾವಿರ ಕೋಟಿ ರೂ. ಆದಾಯ ಹೆಚ್ಚಾಗಿದೆ. ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಹೊಸ ವರ್ಷಕ್ಕೆ ಯಾವುದೇ ತೊಂದ್ರೆ ಆಗಲ್ಲ. ಮುಂದೆಯೂ ಮಾಡಬೇಕಿತ್ತು ಅಲ್ಲ, ಹೀಗಾಗಿ ಈಗ ಮಾಡಿದ್ದೇವೆ ಎಂದು ಹೇಳಿದ್ದಾರೆ.



